ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸಂದೀಪ್ ವಲ್ಸನ್, ಆಯುಷ್ ಶಾಜಿ, ಮೊಹಮ್ಮದ್ ಇಬ್ರಾಹಿಂ ಪಿಪಿ ದೇವನಂದನ್, ಮೊಹಮ್ಮದ್ ಅಬ್ದುಲ್ ಜಬ್ಬರ್ ಮೃತ ದುರ್ದೈವಿಗಳು. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.