ಮೈಸೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 50 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಹೆಚ್ ಡಿ ಕೋಟೆ ಘಟಕಕ್ಕೆ ಸೇರಿದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.