ಮೈಸೂರು: ಫೆಂಗಲ್ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
ಸತತವಾಗಿ ಸುರುಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ. ಇಇದರಿಇಂದಾಗಿ ವಾಹನ ದ್ಸಂಚಾರಕ್ಕೆ ಅಡ್ಡಿಯುಂಟಾಗಿವೆ.
ಬೆಟ್ಟದ ಮೇಲಿಂದ ಬಂಡೆಗಳು ರಸ್ತೆಗುರುಳಿದ್ದು, ಅದೃಷ್ಟವಶಾತ್ ಅನಾಹುತ ಸ್ವಲ್ಪದರಲ್ಲಿ ತಪ್ಪಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಬಂಡೆ, ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.