ವಿಜಯಪುರ : ಪ್ರೀತಿ ಪ್ರೇಮದ ಹೆಸರಿನಲ್ಲಿ ಕಿರುಕುಳ ನೀಡಿದ ಹಿನ್ನೆಲೆ ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿನಹಾಳದಲ್ಲಿ ನಡೆದಿದೆ.
ಸಂಗಮೇಶ ಬುಂಜವಾ ಎಂಬಾತ ಕಾಲೇಜಿಗೆ ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡುತ್ತಿದ್ದನು. ಅಪ್ರಾಪ್ತೆಯ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದನು. ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ಬಾಲಕಿ ಬೆನ್ನಹಿಂದೆ ಬಿದ್ದಿದ್ದನು.
ಯುವಕನ ಕಾಟಕ್ಕೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.