ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಹಿಂಸಾಚಾರ ಪೀಡಿತ ಸಂಭಾಲ್ ಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಜೊತೆ ಉತ್ತರ ಪ್ರದೇಶದ ಕಾಂಗ್ರೆಸ್ ಸಂಸದರು ಕೂಡ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.
ನವೆಂಬರ್ 24 ರಂದು ಎರಡನೇ ಸಮೀಕ್ಷೆಯ ಸಮಯದಲ್ಲಿ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದಾಗ ಹಿಂಸಾಚಾರ ಭುಗಿಲೆದ್ದಿತು. ನಂತರದ ಹಿಂಸಾಚಾರದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದರು.