ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಡಿಸೆಂಬರ್ 3 ರಂದು ಹಾಜರಾಗುವಂತೆ ಸಚಿವ ಜಮೀರ್ ಅಹಮದ್ ಖಾನ್ ಗೆ ನೋಟಿಸ್ ನೀಡಲಾಗಿತ್ತು.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತ್ತು ನಂತರ, ಇಡಿ ಹೆಚ್ಚಿನ ತನಿಖೆಗಾಗಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾಯಿಸಿತ್ತು. ಹೆಚ್ಚಿನ ತನಿಖೆಗಾಗಿ ಎಸಿಬಿ ಪ್ರಕರಣವನ್ನು ಲೋಕಾಯುಕ್ತಕ್ಕೆ ಹಸ್ತಾಂತರಿಸಿದ್ದು, ನಂತರ ಅವರಿಗೆ ನೋಟಿಸ್ ನೀಡಲಾಗಿತ್ತು.