ಬೆಂಗಳೂರು: ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂಪಾಯಿ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ.
ಹನುಮಂತರಾಯಪ್ಪ ಕೊಲೆಯಾದವರು. ಕೆನರಾ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದಾರೆ.
ನಿವೃತ್ತರಾಗಿದ್ದ ಹನುಮಂತರಾಯಪ್ಪ ಏಕೈಕ ಪುತ್ರಿಗಾಗಿ ಕುರುಬರ ಹಳ್ಳಿಯಲ್ಲಿ ಮನೆ ನಿರ್ಮಿಸಲು ಮುಂದಾಗಿದ್ದರು. ತ್ಯಾಮಗೊಂಡ್ಲು ಕೆನರಾ ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡಿಕೊಂಡು ಮನೆಗೆ ಬೇಕಾದ ಸಾಮಗ್ರಿ, ಗ್ಯಾಸ್ ತೆಗೆದುಕೊಂಡು ಟಿವಿಎಸ್ ಮೊಪೆಡ್ ನಲ್ಲಿ ಬರುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿ, ಹಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ತ್ಯಾಮಗೊಂಡ್ಲು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.