ಬೆಂಗಳೂರು: PGCET-24 MBA, MCA, MTech, M.Arch ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಪ್ರಕಟಿಸಲಾಗಿದೆ.
ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದಕ್ಕೂ KEA ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ.
ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಡಿಸೆಂಬರ್ 5 ಕೊನೆ ದಿನವಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ
UGAYUSH-24 :
ಪಿಜಿ ಆಯುಷ್ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಡಿ.4ರ ಬೆಳಿಗ್ಗೆ 11 ಗಂಟೆ ಒಳಗೆ #KEAಗೆ ಇ-ಮೇಲ್ ಮೂಲಕ ಕಳುಹಿಸಬಹುದು. ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದೆ.