ಬೆಂಗಳೂರು: ಬಿಜೆಪಿಯಲ್ಲಿ ಬಣ ಜಗಳ, ಅಸಮಾಧಾನ, ಭಿನ್ನಮತೀಯ ಚಟುವಟಿಕೆಗಳ ನಡುವೆಯೇ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲು ಡಿಸೆಂಬರ್ 7ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಪಡಿಸಲಾಗಿದೆ.
ಬಿಜೆಪಿ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ಡಿ. 7ರಂದು ನಡೆಯಲಿದ್ದು, ಪಕ್ಷದಲ್ಲಿನ ಅಸಮಾಧಾನ, ಭಿನ್ನಮತೀಯ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗುವುದು.
ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಸಭೆಗೆ ಆಗಮಿಸಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ನಾಯಕ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಈಗಾಗಲೇ ಶಿಸ್ತು ಕ್ರಮದ ಬಗ್ಗೆ ಯತ್ನಾಳ್ ಅವರಿಗೆ ನೋಟಿಸ್ ನೀಡಲಾಗಿದೆ. 10 ದಿನದೊಳಗೆ ಉತ್ತರ ನೀಡಲು ಸೂಚಿಸಲಾಗಿದೆ. ಯತ್ನಾಳ್ ಟೀಂ ದೆಹಲಿಯಲ್ಲಿ ವರಿಷ್ಠರಿಗೆ ದೂರು ನೀಡಲು ಮುಂದಾಗಿದೆ. ಇದರ ನಡುವೆಯೇ ಕೋರ್ ಕಮಿಟಿ ಸಭೆ ನಿಗದಿಯಾಗಿರುವುದು ಕುತೂಹಲ ಮೂಡಿಸಿದೆ.