HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆಯಡಿ ಯೂನಿಕ್ ಐಡಿ ಸಂಖ್ಯೆಯುಳ್ಳ ಕಾರ್ಡ್, ನಗದು ರಹಿತ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆಯಡಿ ಯೂನಿಕ್ ಐಡಿ ಸಂಖ್ಯೆಯುಳ್ಳ ಕಾರ್ಡ್, ನಗದು ರಹಿತ ಚಿಕಿತ್ಸೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ನೋಂದಣಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ಖಾಸಗಿ ಕಂಪನಿ ಅಥವಾ ಇತರೆ ಸಂಸ್ಥೆಗಳಲ್ಲಿ ಮಾಸಿಕ 30 ಸಾವಿರ ರೂ.ಗಿಂತ ಹೆಚ್ಚು ವೇತನ ಪಡೆಯುವವರು ಯಶಸ್ವಿನಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಅರ್ಹತೆ ಹೊಂದಿರುವುದಿಲ್ಲ. ಡಿಸೆಂಬರ್ 1ರಿಂದ 31ರವರೆಗೆ ಯಶಸ್ವಿನಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಮುಂದುವರೆಯಲಿದೆ.

2024- 25 ನೇ ಸಾಲಿನ ಚಿಕಿತ್ಸಾ ಅವಧಿಯನ್ನು 2025ರ ಏಪ್ರಿಲ್ 1ರಿಂದ 2026 ರ ಮಾರ್ಚ್ 31 ರವರೆಗೆ ನಿಗದಿಪಡಿಸಲಾಗಿದೆ. ನೋಂದಣಿಯಾದ ಸದಸ್ಯರಿಗೆ ಯೂನಿಕ್ ಐಡಿ ಸಂಖ್ಯೆಯುಳ್ಳ ಕಾರ್ಡ್ ಅನ್ನು ಮುಂದಿನ ವರ್ಷದ ಮಾರ್ಚ್ 1ರಿಂದ ನೀಡಲಾಗುವುದು. 2025 ಏಪ್ರಿಲ್ 1ರಿಂದ ಫಲಾನುಭವಿಗಳು ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ನೆಟ್ವರ್ಕ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಮತ್ತು ನಗರ ಸಹಕಾರ ಸಂಘಗಳು ಒಳಗೊಂಡಂತೆ ಯಾವುದೇ ಸಹಕಾರ ಸಂಘ, ಬ್ಯಾಂಕುಗಳ ಸದಸ್ಯರು ಅಥವಾ ಸಹಕಾರಿ ಸ್ವಸಹಾಯ ಗುಂಪುಗಳ ಸದಸ್ಯರು ಸದಸ್ಯರಾಗಿ ಒಂದು ತಿಂಗಳು ಪೂರ್ಣಗೊಂಡಿದ್ದಲ್ಲಿ ಅಂತಹ ಸದಸ್ಯರು ನಿಗದಿತ ವಾರ್ಷಿಕ ವಂತಿಗೆ ಪಾವತಿಸಿ ಯೋಜನೆಯಡಿ ಸದಸ್ಯರಾಗಲು ಅರ್ಹರಾಗಿರುತ್ತಾರೆ. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯಡಿ ನೋಂದಣಿಯಾಗಿ ಕಾರ್ಯನಿರತ ಸಹಕಾರ ಸಂಘಗಳಲ್ಲಿ ಕನಿಷ್ಠ ಮೂರು ವರ್ಷ ಸೇವೆ ಪೂರ್ಣಗೊಳಿಸಿ ಮಾಸಿಕ 30,000 ರೂ.ಗಿಂತ ಕಡಿಮೆ ವೇತನ ಪಡೆಯುತ್ತಿರುವ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಅನರ್ಹರು ಯಶಸ್ವಿನಿ ಯೋಜನೆಗೆ ನೋಂದಣಿ ಮಾಡಿಕೊಂಡರೆ ಪಾವತಿಸಿದ ವಂತಿಗೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular