HomeKarnatakaGOOD NEWS : ಶೀಘ್ರವೇ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ...

GOOD NEWS : ಶೀಘ್ರವೇ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಅಬಕಾರಿ ಇಲಾಖೆಯಲ್ಲಿಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ ಮಾಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ಘೋಷಣೆ ಮಾಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ.ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು

• ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.
• ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಯಿತು.
ನೋಂದಣಿ ಮತ್ತು ಮುದ್ರಾಂಕ ಇಲಾಖೆ:
• ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು.
. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
• ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
• ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular