alex Certify ಗಮನಿಸಿ : ‘ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ಗೆ ನೊಂದಾಯಿಸಲು ಡಿ.31 ರವರೆಗೆ ಅವಕಾಶ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ಗೆ ನೊಂದಾಯಿಸಲು ಡಿ.31 ರವರೆಗೆ ಅವಕಾಶ, ಇಲ್ಲಿದೆ ಮಾಹಿತಿ

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯ ಸರ್ಕಾರಿ ನೌಕರರಾಗಿದ್ದರೂ ಸೌಲಭ್ಯ ಸಿಗುವುದಿಲ್ಲ. ಈಗಾಗಲೇ ಒಂದು ಯೋಜನೆ ಅಡಿ ಆರೋಗ್ಯ ಸೌಲಭ್ಯ ಪಡೆಯುತ್ತಿರುವವರು ಯಶಸ್ವಿನಿ ಅಡಿ ನೋಂದಾಯಿಸಿಕೊಳ್ಳುವಂತಿಲ್ಲ ಎಂದು ವಿವರಿಸಲಾಗಿದೆ.

ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು.
ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ ಎಂದು ಸಹಕಾರ ಇಲಾಖೆ ಹೇಳಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...