BREAKING : ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಂ ‘ದೇವೇಂದ್ರ ಫಡ್ನವಿಸ್’ , ನಾಳೆ ಪ್ರಮಾಣ ವಚನ ಸ್ವೀಕಾರ.!

ಮಹಾರಾಷ್ಟ್ರ : ನಾಳೆ ಸಂಜೆ 5 ಗಂಟೆಗೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿಯಾದ ಮಹಾಯುತಿ ನಾಯಕರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಶಾಸಕರ ಬೆಂಬಲದ ಸಹಿ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದರು.ಈ ವೇಳೆ ಏಕನಾಥ್ ಶಿಂಧೆ, ಅಜಿತ್ ಪವಾರ್ ಮತ್ತಿತರರಿದ್ದರು.  ನಾಳೆ ಸಂಜೆ 5 ಗಂಟೆಗೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

“ನಾವು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲು ಬೆಂಬಲ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಾಳೆ ಸಂಜೆ 5.30 ಕ್ಕೆ ಪ್ರಮಾಣವಚನ ಸಮಾರಂಭಕ್ಕೆ ರಾಜ್ಯಪಾಲರು ನಮ್ಮನ್ನು ಆಹ್ವಾನಿಸಿದ್ದಾರೆ  ಎಂದು ಫಡ್ನವೀಸ್ ಹೇಳಿದರು. ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ವಿಜಯ್ ರೂಪಾನಿ ಹೇಳಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಭಾರತೀಯ ಜನತಾ ಪಕ್ಷ ಇಂದು ಸರ್ವಾನುಮತದಿಂದ ಆಯ್ಕೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read