HomeIndiaಸ್ವಂತ ಮನೆ ಹೊಂದುವ ಕನಸು ಕಂಡ ಬಡವರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: 2.95 ಕೋಟಿ...

ಸ್ವಂತ ಮನೆ ಹೊಂದುವ ಕನಸು ಕಂಡ ಬಡವರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: 2.95 ಕೋಟಿ ಮನೆ ನಿರ್ಮಾಣಕ್ಕೆ ಅನುಮೋದನೆ

ನವದೆಹಲಿ: ಬಡವರಿಗೆ 2.95 ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆಗಳನ್ನು ಒದಗಿಸುವ ಪ್ರಯತ್ನದಲ್ಲಿ ಸರ್ಕಾರ 2.95 ಕೋಟಿ ಮನೆಗಳಿಗೆ ಅನುಮೋದನೆ ನೀಡಿದೆ. ಮುಂದಿನ ಐದು ವರ್ಷಗಳಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಯೋಜನೆಯಡಿ 38 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದ್ದು, ಇದಕ್ಕಾಗಿ 10600 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ. ಪಿಎಂ-ಜನ್ಮನ್ ಅಡಿಯಲ್ಲಿ, 2024-25 ನೇ ಸಾಲಿಗೆ ನಿರ್ದಿಷ್ಟವಾಗಿ ಬುಡಕಟ್ಟು ಕುಟುಂಬಗಳಿಗೆ 46 ಸಾವಿರಕ್ಕೂ ಹೆಚ್ಚು ಮನೆಗಳನ್ನು ಹಂಚಲಾಗಿದೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular