ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಿಸುವ ಸಂಬಂಧ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ, ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ಇದ್ದು, ಮುಂದೆ ನೋಡೋಣ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಗಡಿ ಕಾರ್ಯಕ್ರಮದಲ್ಲಿ ರೈತರು ಮತ್ತು ಸಹಕಾರ ಸಚಿವರು ಹಾಲಿನ ದರ ಹೆಚ್ಚಿಸುವಂತೆ ಕೋರಿ ಸಿಎಂಗೆ ಬೇಡಿಕೆ ಇಟ್ಟಿದ್ದಾರೆ. ಅದರ ಬಗ್ಗೆ ಮುಂದೆ ಚರ್ಚೆ ಮಾಡೋಣ. ಸದ್ಯಕ್ಕೆ ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಹಾಲಿಗೆ ದೆಹಲಿಯಲ್ಲಿ ದೊಡ್ಡ ಮಾರುಕಟ್ಟೆ ಇದೆ. ಪ್ರಸ್ತುತ 11000 ಲೀಟರ್ ನಷ್ಟು ಹಾಲು ನಿತ್ಯ ಮಾರಾಟವಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಒಂದು ಲಕ್ಷ ಲೀಟರ್ ಗೆ ಹೆಚ್ಚಿಸುವ ಗುರಿಯಿದೆ ಎಂದು ತಿಳಿಸಿದ್ದಾರೆ.