HomeKarnatakaದೇವೇಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ಜನಕಲ್ಯಾಣ ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಜನ...

ದೇವೇಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ಜನಕಲ್ಯಾಣ ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ತವರು ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದ್ದು, ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅರಸೀಕೆರೆ ರಸ್ತೆಯ ಎಸ್ಎಂ ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಇಡೀ ಹಾಸನ ನಗರ ಕಾಂಗ್ರೆಸ್ ಮಯವಾಗಿದ್ದು, ನಗರದಲ್ಲಿ ಕಾಂಗ್ರೆಸ್ ನಾಯಕರ ಬ್ಯಾನರ್ ಗಳು, ಫ್ಲೆಕ್ಸ್, ಕಟೌಟ್ ಗಳು ರಾರಾಜಿಸುತ್ತಿವೆ. ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಸ್ವಾಭಿಮಾನಿ ಸಮಾವೇಶವಾಗಿದ್ದ ಇದನ್ನು ಕಾಂಗ್ರೆಸ್ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶ ಎಂದು ಬದಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular