ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ.
ತುಮಕೂರಿನ ನವಿಲಹಳ್ಳಿ ನಿವಾಸಿ ಹನುಮಂತರಾಜು(40) ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಹನುಮಂತರಾಜು ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.