ಬೆಂಗಳೂರು : ಆನ್ ಲೈನ್ ಗೇಮ್ ಹುಚ್ಚಿಗೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆ ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಪ್ರವೀಣ್ (19) ಎಂದು ಗುರುತಿಸಲಾಗಿದೆ. ಕಳೆದ 10 ದಿನದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜು ವಿದ್ಯಾರ್ಥಿ ಪ್ರವೀಣ್ ಕಾಲೇಜಿಗೆ ಬಂಕ್ ಮಾಡಿ ಯಾವಾಗಲೂ ಗೇಮ್ ಆಡುತ್ತಿದ್ದನು. ಓದು ಅಷ್ಟಕಷ್ಟೇ. ಆನ್ ಲೈನ್ ನಲ್ಲಿ ಬೆಟ್ಟಿಂಗ್ ಕಟ್ಟಿ ಗೇಮ್ ಆಡುತ್ತಿದ್ದನು. ಇದರಿಂದ ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದನು.
ಸಾಲ ನೀಡಿದವರು ಆನ್ ಲೈನ್ ನಲ್ಲಿ ಗೆದ್ದ ಹಣವನ್ನು ಕಿತ್ತುಕೊಂಡು ಹೋಗುತ್ತಿದ್ದರು.
ಸಾಲ ತೀರಿಸಲಾಗದೇ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 3 ದಿನದ ಹಿಂದೆ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.