alex Certify BREAKING : ನಟ ದರ್ಶನ್’ಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್’ಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದ್ದು, ಮಧ್ಯಂತರ ಜಾಮೀನು ರದ್ದು ಪೊಲೀಸರು ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಮುಂದಿನ ವಾರ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ನಡೆಯಲಿದೆ.

ಅನಾರೋಗ್ಯ ಹಿನ್ನೆಲೆ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದು, ಬಳ್ಳಾರಿ ಜೈಲಿಂದ ಹೊರ ಬಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಾ ಬಂದರೂ ಇನ್ನೂ ಕೂಡ ದರ್ಶನ್ ಸರ್ಜರಿ ಮಾಡಿಸಿಕೊಂಡಿಲ್ಲ. ತನಿಖಾ ತಂಡ ದರ್ಶನ್ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ ಮಾಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ಹೈಕೋರ್ಟ್ ನಲ್ಲಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಮೊದಲಾದವರ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಪರ ವಕೀಲರು ವಾದ ಮಂಡಿಸಿದರು. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.ಇದರ ನಡುವೆ ನಟ ದರ್ಶನ್’ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ.

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...