ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿ ತಯಾರಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದ್ದಾರೆ. ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿರುವ ಯೋಜನೆಗೆ ವೇಗ ನೀಡುವಂತೆ ಸೂಚಿಸಿದ್ದಾರೆ.
ಕೆಜಿಎಫ್ ನಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲು ಸರ್ಕಾರದ 960 ಎಕರೆ ಜಮೀನು ಇದ್ದು, ಹೆಚ್ಚುವರಿಗಾಗಿ 294 ಎಕರೆ ಜಾಗ ಗುರುತಿಸಲಾಗಿದೆ. ಗುರುತಿಸಲಾದ ಜಮೀನು ಕೂಡಲೇ ಸ್ವಾಧೀನಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.