alex Certify ಪತ್ರಿಕೋದ್ಯಮ ಪ್ರಶಿಕ್ಷಣ (ಅಪ್ರೆಂಟಿಸ್) ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಿಕೋದ್ಯಮ ಪ್ರಶಿಕ್ಷಣ (ಅಪ್ರೆಂಟಿಸ್) ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಧಾರವಾಡ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಗಳನ್ನು ವೃತ್ತಿ ತರಬೇತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಪದವಿಧರ ಅಥವಾ ಸ್ನಾತಕೋತ್ತರ ಪದವಿಧರರಿಗೆ ಧಾರವಾಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಅಭ್ಯರ್ಥಿಗಳಿಗೆ 2025 ರ ಜನವರಿಯಿಂದ ಡಿಸೆಂಬರ್ವರೆಗೆ 12 ತಿಂಗಳ ಅವಧಿಯ ಪ್ರಶಿಕ್ಷಣ (ಅಪ್ರೆಂಟಿಸ್) ತರಬೇತಿ ನೀಡಲಾಗುವುದು.

ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕನ್ನಡ ಮತ್ತು ಇಂಗ್ಲೀಷ ಉತ್ತಮ ಭಾಷಾಜ್ಞಾನ, ಕಂಪ್ಯೂಟರ್ ಜ್ಞಾನವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

2024ರ ಡಿಸೆಂಬರ್ 20 ರೊಳಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9538076619 ಗೆ ಅಥವಾ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧಾರವಾಡ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...