ಸ್ಟೈಲಿ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ2’ ಚಿತ್ರಕ್ಕಾಗಿ ಕಾತುರದಿಂದ ಕಾದಿದ್ದ ಅಭಿಮಾನಿಗಳಲ್ಲಿ ಇಂದು ಸಂತಸ ಮನೆ ಮಾಡಿದೆ. ಅಲ್ಲು ಅರ್ಜುನ್ ಅಭಿಮಾನಿಗಳು ಬ್ಯಾನರ್ಗಳಿಗೆ ಹೂವಿನ ಹಾರ ಹಾಗೂ ಹಾಲಿನ ಅಭಿಷೇಕ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಒಳ್ಳೆಯ ಮೆಚ್ಚುಗೆ ದೊರೆತಿದ್ದು, ಬಾಹುಬಲಿ ದಾಖಲೆಯನ್ನು ಅಳಿಸಿ ಹಾಕಲಿದೆ ಎಂದಿದ್ದಾರೆ.
ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಲಮಂಚಿಲಿ ರವಿಶಂಕರ್ ಹಾಗೂ ನವೀನ್ ಯೆರ್ನೇನಿ ನಿರ್ಮಾಣ ಮಾಡಿದ್ದು, ಅಲ್ಲು ಅರ್ಜುನ್ ಸೇರಿದಂತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಸುನಿಲ್, ಅನಸೂಯಾ ಭಾರದ್ವಾಜ್, ರಾವ್ ರಮೇಶ್, ಅಜಯ್ ಘೋಷ್, ಧನಂಜಯ, ಆದಿತ್ಯ ಮೆನನ್, ಬ್ರಹ್ಮಾಜಿ, ದಯಾನಂದ ರೆಡ್ಡಿ, ಬಣ್ಣ ಹಚ್ಚಿದ್ದಾರೆ. ನವೀನ್ ನೂಲಿ ಸಂಕಲನ, ಮಿರೋಸ್ಲಾವ್ ಕುಬಾ ಬ್ರೋಜೆಕ್ ಛಾಯಾಗ್ರಹಣವಿದ್ದು, ದೇವಿ ಶ್ರೀಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ.