alex Certify BREAKING : ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾ ಸಾಧಕರ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾ ಸಾಧಕರ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ.!

ಬೆಂಗಳೂರು : ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ ನೀಡಿದೆ.

ಹೌದು, ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿದ್ದ 18:09:2024 ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ: 18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡಿದೆ.

ಏನಿದೆ ಆದೇಶದಲ್ಲಿ..?

ದಿನಾಂಕ:18.09.2024ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.
ಆದರೆ, ಸರ್ಕಾರವು 2:18.09.20240 ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ.
ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...