ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2022ರ ಜುಲೈನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ನೆಟ್ಟಾರು ಅವರನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಐಎ ಆಗಸ್ಟ್ 4, 2022 ರಂದು ಸ್ಥಳೀಯ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡಿತ್ತು ಮತ್ತು ಜನವರಿ 2023 ರಲ್ಲಿ 21 ಆರೋಪಿಗಳ ವಿರುದ್ಧ ಚಾರ್ಜ್’ಶೀಟ್ ಸಲ್ಲಿಸಿತ್ತು.