alex Certify ಬಚ್ಚೇಗೌಡ, ಬೈರೇಗೌಡ ಸೇರಿ ಎಷ್ಟೋ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಚ್ಚೇಗೌಡ, ಬೈರೇಗೌಡ ಸೇರಿ ಎಷ್ಟೋ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಅವರು ಮಾತನಾಡಿ, ಡಾ.ರಾಜ್ ಅವರು ಅಭಿಮಾನಿಗಳನ್ನು ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ನನ್ನ ಅನಂತ ಧನ್ಯವಾದಗಳು ಎಂದು ಹೇಳಿದ್ದಾರೆ.

ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನತೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು ಎಂದು ಟೀಕಿಸಿದ್ದಾರೆ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ, ಈಗ ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು.  ಇದನ್ನು ನೀವು ಒಪ್ಪಿಕೊಳ್ಳುತ್ತೀರಾ? ಸಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ನಬಾರ್ಡ್ ಸಾಲದಲ್ಲಿ ಶೇ. 58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ನಷ್ಟ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ? ರಾಜ್ಯಕ್ಕೆ, ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಕುಮಾರಸ್ವಾಮಿ ಮತ್ತು ಬಿಜೆಪಿ ಸಂಸದರು ತಾಕತ್ತಿದ್ದರೆ ಸರಿಪಡಿಸಲಿ ಎಂದು ಹೇಳಿದ್ದಾರೆ.

ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ. ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...