ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಾಗಿದೆ.
ಬಾಂಗ್ಲಾದೇಶದಲ್ಲಿ ಚಿನ್ಮಯಿ ಕೃಷ್ಣದಾಸ್ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಈಶ್ವರಪ್ಪ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಮಥುರಾ ಪ್ಯಾರಡೈಸ್ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಈಶ್ವರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಅನ್ಯ ಧರ್ಮದ ವಿರುದ್ಧ, ಕೋಮು ಭಾವನೆ ಕೆರಳಿಸುವ ಹಾಗೂ ದ್ವೇಷ ಭಾವನೆ ಮೂಡಿಸುವ ಭಾಷಣ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.
20 ದಿನಗಳ ಹಿಂದೆ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಕೇಸು ದಾಖಲಾಗಿತ್ತು.