ಬೆಂಗಳೂರು: ಕಾರಿನ ಟಾಪ್ ಮೇಲೆ ನಾಯಿಗಳನ್ನು ಕೂರಿಸಿಕೊಂಡು ಚಾಲನೆ ಮಾಡಿದ್ದ ಆರೋಪಿ ಚಾಲಕ ಹರೀಶ್(36) ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಯಾವುದೇ ಸುರಕ್ಷತೆ ಇಲ್ಲದೆ ನಾಯಿಗಳನ್ನು ಟಾಪ್ ಮೇಲೆ ಕೂರಿಸಿದ್ದ ವಾಹನದಟ್ಟಣೆಯ ರಸ್ತೆಯಲ್ಲಿ ಕಾರ್ ಚಾಲನೆ ಮಾಡಿದ್ದ. ಮೂರು ನಾಯಿಗಳನ್ನು ಕೂಡಿಸಿಕೊಂಡು ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿದ್ದನ್ನು ಕೇಳಲು ಹೋದವರಿಗೆ ಅವಾಚ್ಯ ಶಬ್ದಗಳಿಂದ ಹರೀಶ್ ನಿಂದಿಸಿದ್ದ.
ಕಲ್ಯಾಣ ನಗರ ಸಮೀಪ ಈ ರೀತಿ ನಾಯಿಗಳನ್ನು ಕೂರಿಸಿಕೊಂಡು ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಲಾಗಿದೆ.