ನವದೆಹಲಿ: ಸಾರ್ವಜನಿಕ ವಿತರಣೆ ವ್ಯವಸ್ಥೆ ಸರಬರಾಜನ್ನು ಗರಿಷ್ಠಗೊಳಿಸಲು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಅನ್ನಚಕ್ರ ಯೋಜನೆಗೆ ಚಾಲನೆ ನೀಡಿದ್ದಾರೆ.
ವಿಶ್ವ ಆಹಾರ ಕಾರ್ಯಕ್ರಮ ಮತ್ತು ಐಐಟಿ ದೆಹಲಿ ಪಾಲುದಾರಿಕೆಯಲ್ಲಿ ಈ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. ದೇಶಾದ್ಯಂತ ಪಡಿತರ ಆಹಾರ ಸಾಮಗ್ರಿಗಳ ಸಾಗಾಟ ಜಾಲವನ್ನು ಸುಗಮಗೊಳಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.
ಆರಂಭದಲ್ಲಿ 4.37 ಲಕ್ಷ ಪಡಿತರ ನ್ಯಾಯಬೆಲೆ ಅಂಗಡಿಗಳು, 6700 ಗೋದಾಮುಗಳು ಯೋಜನೆಯ ವ್ಯಾಪ್ತಿಗೆ ಬರುತ್ತವೆ. 81 ಕೋಟಿ ಫಲಾನುಭವಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ವಾರ್ಷಿಕ 250 ಕೋಟಿ ರೂಪಾಯಿ ಉಳಿತಾಯವಾಗಬಹುದೆಂದು ನಿರೀಕ್ಷಿಸಲಾಗಿದೆ.
ಈ ಉಪಕ್ರಮಗಳು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸಲು, ವೆಚ್ಚವನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಿಗೆ ಅಗತ್ಯ ಸರಕುಗಳ ಸಕಾಲಿಕ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
‘ಅನ್ನ ಚಕ್ರ’ PDS ಪೂರೈಕೆ ಸರಪಳಿ ಆಪ್ಟಿಮೈಸೇಶನ್ ಟೂಲ್ ಮತ್ತು SCAN ಪೋರ್ಟಲ್ ಎರಡೂ ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ನಮಗೆ ದೊಡ್ಡ ಉಳಿತಾಯವನ್ನು ಖಚಿತಪಡಿಸುತ್ತದೆ ಮತ್ತು ಸಾರಿಗೆ ಸಮಯವನ್ನು ಕಡಿಮೆ ಮಾಡುವ ಮೂಲಕ ದಕ್ಷತೆಯನ್ನು ಹೆಚ್ಚಿಸುತ್ತದೆ.
— Pralhad Joshi (@JoshiPralhad) December 5, 2024