ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
(ಡಿ.6 ರಂದು)ಇಂದು ಶುಕ್ರವಾರ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ನಟ ದರ್ಶನ್ ಗೆ ಜಾಮೀನು ಸಿಗುತ್ತಾ..? ಜಾಮೀನು ಅರ್ಜಿ ತಿರಸ್ಕಾರವಾಗುತ್ತಾ ಎಂಬುದು ಇಂದು ನಿರ್ಧಾರವಾಗಲಿದೆ.
ಹೈಕೋರ್ಟ್ ನಲ್ಲಿ ಡಿ. 3 ರಂದು ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಮೊದಲಾದವರ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಪರ ವಕೀಲರು ವಾದ ಮಂಡಿಸಿದರು.
ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು.