ಕಟ್ಟಡದಿಂದ ಜಿಗಿದು ವದ್ಯಕಿಯ ಸಹಾಯಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ ನಡೆದಿದೆ.
ವೈದ್ಯಕೀಯ ಸಹಾಯಕಿಯಾಗಿದ್ದ 21 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾದವಳು. ಕಟ್ಟಡದ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗುರುಗ್ರಾಮದ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ವೃದ್ಧ ದಂಪತಿ ನೋಡಿಕೊಳ್ಳಲೆಂದು ಆಕೆಯನ್ನು ನೇಮಿಸಲಾಗಿತ್ತು. ಇದ್ದಕ್ಕಿದ್ದಂತೆ ಯುವತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಯುವತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಪೋಷಕರು ವರೆಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.