ಪ್ರೊ ಕಬಡ್ಡಿಯ ಪ್ಲೇ ಆಫ್ ಸ್ಥಾನಕ್ಕಾಗಿ ಎಲ್ಲಾ ತಂಡಗಳು ಭರ್ಜರಿ ಹೋರಾಟ ನಡೆಸುತ್ತಿದ್ದು, ಈಗಾಗಲೇ ಮೂರು ತಂಡಗಳು ಪ್ಲೇ ಆಫ್ ರೇಸ್ ನಿಂದ ಹೊರ ಬಿದ್ದಿವೆ. ಇನ್ನೇನು ಕೆಲವೇ ದಿನಗಳಲ್ಲಿ ಯಾವ ತಂಡ ಪ್ಲೇ ಆಫ್ ಪ್ರವೇಶಿಸಲಿದೆ ಎಂಬುದು ನಿರ್ಧಾರವಾಗಲಿದೆ.
ಇಂದು ಪುಣೆ ಯಲ್ಲಿ ನಡೆಯಲಿರುವ ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ತಮಿಳ್ ತಲೈವಾಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ. ಗುಜರಾತ್ ಜೈಂಟ್ಸ್ ತಂಡಕ್ಕೆ ಪ್ಲೇ ಆಫ್ ಗೆ ಬರುವ ಸಾಧ್ಯತೆ ಕಡಿಮೆಯಿದ್ದು, ಈ ಬಾರಿ ಮಾಡಿದ ತಪ್ಪುಗಳನ್ನು ಸರಿ ಮಾಡಿಕೊಳ್ಳಲು ಉತ್ಸಾಹದಿಂದ ಕಣಕ್ಕಿಳಿಯಲಿದೆ.
ಇನ್ನು ತಮಿಳ್ ತಲೈವಾಸ್ ತಂಡಕ್ಕೆ ಪ್ಲೇ ಆಫ್ ತಲುಪುವ ಅವಕಾಶವಿರುವ ಕಾರಣ ಇಂದಿನ ಪಂದ್ಯವನ್ನು ಗೆಲ್ಲಲೇ ಬೇಕಾಗಿದೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಹಾಗೂ ಪಟ್ನಾ ಪೈರೇಟ್ಸ್ ಸೆಣಸಾಡಲಿವೆ.