ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಡಿ.3 ರಂದು ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೋಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
‘’ಮುಸ್ಲಿಮರು ಅನ್ನ ಹಾಕಿದ ಮನೆಗೆ ಕನ್ನ ಹಾಕುವ ರಕ್ತದವರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನೋಡಿದರೆ ಅದು ಮನದಟ್ಟಾಗುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.