ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿದ ಮೂಲ ವೃಂದದ -150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ ಡಿ.07 ರಂದು ಮಧ್ಯಾಹ್ನ 2.00 ರಿಂದ 04ರವರೆಗೆ ಕನ್ನಡ ಭಾಷಾ ಪರೀಕ್ಷೆಯನ್ನು ಶಿವಮೊಗ್ಗ ನಗರದ 34 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಡಿ.08 ರಂದು ಬೆಳಗ್ಗೆ 10.00 ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 2.00 ರಿಂದ 4.00ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಶಿವಮೊಗ್ಗ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆಯವರೆಗಿನ ಪ್ರದೇಶದಲ್ಲಿ ಡಿ. 07ರ ಮಧ್ಯಾಹ್ನ 1.00 ರಿಂದ ಸಂಜೆ 5.00 ರವರೆಗೆ ಹಾಗೂ ಡಿ. 08 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಭಾ.ನಾ.ಸು.ಸಂ.: -2023ರ ಕಲಂ 163ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹೇಮಂತ್ ಎನ್.ರವರು ಅದೇಶ ನೀಡಿದ್ದಾರೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಳತೆಯಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೇರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ಪ್ರತಿಬಂಧಿಸಿದೆ. ಮೊಬೈಲ್ ಬಳಕೆಯನ್ನು ನಿಷೇಧಿಸಿದೆ. ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ಪರೀಕ್ಷಾ ಕೇಂದ್ರಗಳ ಫಾಸಲೆ ಪ್ರವೇಶಿಸುವುದನ್ನು ನಿಷೇಧಿಸಿದೆ.