ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಗೆ ರಾಧಾಮೋಹನ್ ದಾಸ್ ಆಗಮಿಸಲಿದ್ದಾರೆ.
ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತಾ ಎಂಬುದು ಸದ್ಯಕ್ಕಿರುವ ಕುತೂಹಲ.
ಬಣಗಳ ಬಡಿದಾಟದ ಬಗ್ಗೆ ಮಾಜಿ ಸಿಎಂ ಡಿವಿ ಸದಾನಂದ ಗೌಡ ಸಭೆಯಲ್ಲಿ ಪ್ರಸ್ತಾಪಿಸಲಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮದ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ಬಣಗಳ ಬಡಿದಾಟದ ವಿಚಾರಕ್ಕೆ ಬಿಜೆಪಿ ನಾಯಕರು ಯಾವ ರೀತಿಯಾಗಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.