ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.
71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ ಪೊಲೀಸರು ಕೇರಳ ಮೂಲದ ಓರ್ವ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕುಮಾರಸ್ವಾಮಿ ಲೇಔಟ್ ನ ಚಂದ್ರನಗರದಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಸಿಕೊಂಡಿರುವ ಪೊಲೀಸರು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದಾರೆ.