ಬಳ್ಳಾರಿ : ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಬಾಣಂತಿಯರ ಸರಣಿ ಸಾವಿನಿಂದ ಸಾಕಷ್ಟು ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ.
ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸುಮಯ್ಯಾ(24) ಮೃತಪಟ್ಟವರು. ಕೂಡ್ಲಿಗಿ ಮೂಲದ ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿತ್ಯವೂ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರ ತೊಂದರೆಯಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.