ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದಾಗಿ ರಾಜ್ಯ ಸರ್ಕಾರ ಭಾರಿ ಟೀಕೆಗೆ ಗುರಿಯಾಗಿತ್ತು. ಇದೀಗ ರಸ್ತೆಗುಂಡಿಗಳನ್ನು ಮುಚ್ಚಲು ಹಾಗೂ ಡಾಂಬರೀಕರಣಕ್ಕಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ.
ರಸ್ತೆ ಡಾಂಬರೀಕರಣಕ್ಕಾಗಿ 694 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 694 ಕೋಟಿ ರೂ.ಅನುದಾನದಲ್ಲಿ 1681 ಕಿ.ಮೀ ಬಿಬಿಎಂಪಿ ವ್ಯಾಪ್ತೊಯ ಉಪಮುಖ್ಯ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಸಂಪಂಗಿರಾಮನಗರದಲ್ಲಿ ಸಮಾಜಕಲ್ಯಾಣ ಭವನ ನಿರ್ಮಾಣಕ್ಕೆ 40.50 ಕೋಇ ರೂ ಅನುದಾನಕ್ಕೆ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದರು.