ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರಿನದ್ದಿವರ ರುಮ್ದ-ಮುಂಡ ಬೇರ್ಪಟ್ಟಿದೆ.
ಹುಣಸಗಿಯಿಂದ ತಾಳಿಕೋಟೆಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.