ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಬೆಸ್ಕಾಂ ಸೇರಿದಂತೆ ರಾಜ್ಯದ ಎಸ್ಕಾಂಗಳಿಂದ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಇದು ಸಹಜ ಪ್ರಕ್ರಿಯೆಯಾಗಿದೆ. ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸುತ್ತವೆ. ಉದ್ಯಮಿಗಳು, ಸಾರ್ವಜನಿಕರು, ವ್ಯಾಪಾರಸ್ಥರು ಸೇರಿದಂತೆ ಮಧ್ಯಸ್ಥಗಾರರೊಂದಿಗೆ ಕೆಇಆರ್ಸಿ ಚರ್ಚೆ ನಡೆಸಿ ಅಂತಿಮವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ವೆಚ್ಚ ಕಡಿಮೆ ಮಾಡಿದೆ. ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಎಲ್ಲರೊಂದಿಗೆ ಚರ್ಚಿಸಿ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.