HomeKarnataka'ಮರಣ ಪ್ರಮಾಣ ಪತ್ರ' ಷರತ್ತು ರದ್ದು: ಜನನ ಮತ್ತು ಮರಣ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

‘ಮರಣ ಪ್ರಮಾಣ ಪತ್ರ’ ಷರತ್ತು ರದ್ದು: ಜನನ ಮತ್ತು ಮರಣ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಒಂದು ವರ್ಷಕ್ಕಿಂತ ಹಿಂದಿನ ಸಾವಿನ ಪ್ರಕರಣಗಳಲ್ಲಿ ಮರಣ ಪ್ರಮಾಣ ಪತ್ರ ಪಡೆಯಲು ಇನ್ನು ನ್ಯಾಯಾಲಯದ ಮೊರೆ ಹೋಗಬೇಕಿಲ್ಲ. ಒಂದು ವರ್ಷದ ಹಿಂದೆ ಸಾವಾಗಿದ್ದಲ್ಲಿ ಕೋರ್ಟ್ ಮೊರೆ ಕಡ್ಡಾಯ ಎನ್ನುವ ಷರತ್ತನ್ನು ರಾಜ್ಯ ಸಚಿವ ಸಂಪುಟ ರದ್ದು ಮಾಡಿದೆ.

ವರ್ಷಕ್ಕಿಂತ ಹಿಂದಿನ ಸಾವಿನ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶದ ಮೂಲಕವೇ ಮರಣ ಪ್ರಮಾಣ ಪತ್ರ ಪಡೆಯಬೇಕು ಎನ್ನುವ ಷರತ್ತು ರದ್ದುಗೊಳಿಸುವ ಜನನ ಮತ್ತು ಮರಣ ತಿದ್ದುಪಡಿ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮರಣ ಪ್ರಮಾಣ ಪತ್ರದಲ್ಲಿ ಲಭ್ಯವಿದ್ದಲ್ಲಿ ಕಾಯಿಲೆಯ ಅಥವಾ ಆಸ್ಪತ್ರೆಯ ಹಿನ್ನೆಲೆಯನ್ನು ದಾಖಲಿಸಿ ಡಿಜಿಟಲ್ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular