alex Certify BIG NEWS: ಮುಡಾದಲ್ಲಿ ಮತ್ತೊಂದು ಮಹಾ ಭ್ರಷ್ಟಾಚಾರ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ನಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾದಲ್ಲಿ ಮತ್ತೊಂದು ಮಹಾ ಭ್ರಷ್ಟಾಚಾರ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ನಷ್ಟ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರಮೇಲೊಂದರಂತೆ ಅಕ್ರಮಗಳು ಬಲಯಾಗುತ್ತಿದೆ. ಕೇವಲ 3000 ರೂಪಾಯಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಸರ್ಕಾರಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ.

ಮುಡಾ ಮಾಜಿ ಆಯುಕ್ತ ದಿನೇಶ್ ಹಾಗೂ ರಿಯಲ್ ಎಷ್ಟೇಟ್ ಉದ್ಯಮಿ ಕಾರ್ತಿಕ್ ಬಡಾವಣೆಯ ಮಂಜುನಾಥ್ ಅವರಿಂದ ಈ ಭೂಗಳ್ಳತನ ನಡೆದಿದೆ ಎನ್ನಲಾಗಿದೆ. ಜಾರಿ ನಿರ್ದೇಶನಾಲಯ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ದಿನೇಶ್ ಹಾಗೂ ಮುಂಜುನಾಥ್ ಈ ವಿಚಾರ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಮಾಜಿ ಆಯುಕ್ತ ದಿನೇಶ್ ಉದ್ಯಮಿ ಮಂಜುನಥ್ ಅವರಿಗೆ ಪ್ರೋತ್ಸಾಹದಾಯಕ ಯೋಜನೆ ಹೆಸರಲ್ಲಿ 5 ದಿನಗಳಲ್ಲಿ ಒಂದು ನಿವೇಶನಕ್ಕೆ 3 ಸಾವಿರ ರೂಪಾಯಿಯಂತೆ 23 ಸೈಟ್ ಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...