ತುಮಕೂರು : ಹುಡುಗಿ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಹುಡುಗಿ ಮನೆ ಮುಂದೆ ಯುವಕ ನೇಣಿಗೆ ಶರಣಾದ ಘಟನೆ ಜಯನಗರದಲ್ಲಿ ನಡೆದಿದೆ.
ಮಂಜುನಾಥ್ ಎಂಬ ಯುವಕ ನಿನ್ನೆ ತಡರಾತ್ರಿ ಯುವತಿ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಜುನಾಥ್ ಹಾಗೂ ಹುಡುಗಿ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯನ್ನು ಮದುವೆ ಮಾಡಿಕೊಡಿ ಎಂದು ಮಂಜುನಾಥ್ ಹುಡುಗಿ ಮನೆಯವರ ಬಳಿ ಹೇಳಿದ್ದಾನೆ.ಹುಡುಗಿ ಅಪ್ರಾಪ್ತೆಯಾಗಿದ್ದರಿಂದ ಪೋಷಕರು ಮದುವೆಗೆ ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಮಂಜುನಾಥ್ ಹುಡುಗಿ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.