ರಾಯ್ಪುರ: ಪೊಲೀಸರಿಗೆ ಮಾಹಿತಿ ನೀಡಿದ ಆರೋಪದಲ್ಲಿ ಅಂಗನವಡಿ ಕಾರ್ಯಕರ್ತೆಯೊಬ್ಬರನ್ನು ಮಾವೋವಾದಿಗಳು ಹತ್ಯೆ ಮಾಡಿರುವ ಘಟನೆ ಛತ್ತೀಸಗಢದ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ತಿಮ್ಮಾಪುರ ಗ್ರಾಮದ ಎದುರು ಕತ್ತು ಹಿಸುಕಿ ಕೊಲೆ ಮಾಡಿರುವ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಈ ಬಗ್ಗೆ ಬಿಜಾಪುರ ಪೊಲೀಸರು ಮಾಹಿತಿ ನೀಡಿದ್ದು, ನಿಶೇಧಿತ ಸಂಘಟನೆ ಸಿಪಿಐಎಂ ಮಡಾಯಿ ಪ್ರದೇಶ ಸಮಿತಿಯ ಕರಪತ್ರವು ಘಟನಾ ಸ್ಥಳದಲ್ಲಿ ಪತ್ತೆಯಾಗಿದೆ. ಮಹಿಳೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎಂದು ಕರಪತ್ರದಲ್ಲಿ ಆರೋಪಿಸಲಾಗಿದೆ.
ಸದ್ಯ ಮಹಿಳೆಯ ಶವ ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.