ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಿಕೆ ನೀಡಿದ್ದು, ಮುನಿಯಪ್ಪ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರ್ಯಾರು ಎಲ್ಲೆಲ್ಲಿಇ ಮಾಹಿತಿ ಪಡೆದಿದ್ದಾರೆ ಗೊತ್ತಿಲ್ಲ. ಮುನಿಯಪ್ಪನವರಿಗೆ ಈ ಬಗ್ಗೆ ಮಾಹಿತಿ ಇರಬಹುದು. ನನಗಿಂತ ಹೆಚ್ಚಾಗಿ ಅವರಿಗೆ ಮಾಹಿತಿ ಇರಬಹುದು ಎಂದು ಹೇಳಿದ್ದಾರೆ.
ಅಧಿಕಾರ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿಗಳು, ಅಧ್ಯಕ್ಷರು, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.