ಚಾಮರಾಜನಗರ : ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ನಾನು ಈಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ, ಜನರ ಪ್ರೀತಿ ಹಾಗೂ ಅಭಿಮಾನ ಗಳಿಸದೇ ಇದ್ರೆ ನನಗೆ ರಾಜಕೀಯದಲ್ಲಿ ಉಳಿಗಾಲ ಇಲ್ಲ ಎಂದರು.
ಚಾಮರಾಜಗರ ಜಿಲ್ಲೆಗೆ 20 ಬಾರಿ ಬಂದಿದ್ದೇನೆ, ಸಿಎಂ ಸ್ಥಾನ ಮತ್ತಷ್ಟು ಗಟ್ಟಿಯಾಗಿದೆ ಎಂದರು. ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಎಂದು ಅಭಿಮಾನಿಗಳು ಕೂಗಿದ್ದು, ಆಗ ಜನರ ಕೂಗಿಗೆ ಸಿಎಂ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು 2 ನೇ ಬಾರಿ ಸಿಎಂ ಆಗಿ ಚಾಮರಾಜನಗರಕ್ಕೆ ಬಂದಿದ್ದೇನೆ, ಈ ಮೂಢನಂಬಿಕೆಯನ್ನು ನಾನು ನಂಬಲ್ಲ ಎಂದರು.ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದೆವು. ಆಗ ನಾನು ಡಿಸಿಎಂ ಆಗಿದ್ದೆ. ನಾನು ಏನಿಲ್ಲ ಅಂದರೂ 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದರು.