ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ವರಿಷ್ಠರಿಗೆ ಶಿಫಾರಸು ಮಾಡಲಾಗಿದೆ.
ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಬಗ್ಗೆ ವರಿಷ್ಠರಿಗೆ ಮನವಿ ಮಾಡಲು ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ತೀರ್ಮಾನ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಚಿಹ್ನೆಯಡಿ ಗೆದ್ದ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಹಲವು ತಿಂಗಳಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಜೊತೆ ಅಧಿಕೃತವಾಗಿ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲು ಕೋರ್ ಕಮಿಟಿ ಸಭೆ ಸರ್ವಾನುಮತದಿಂದ ಕೋರಿದೆ. ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ನಾಯಕರ ಗಮನಕ್ಕೆ ಈ ವಿಚಾರ ತಂದು ಕ್ರಮಕ್ಕೆ ಮನವಿ ಮಾಡಸಲಾಗುವುದು ಎಂದು ಹೇಳಿದ್ದಾರೆ.