ಬೆಂಗಳೂರು: ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣೆ ಮಾಡಿರುವ ಸರ್ಕಾರಿ ಸಂಸ್ಥೆ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ(KSRTC) ಲಭಿಸಿದೆ.
ಸತತ 10ನೇ ಬಾರಿಗೆ ಕೆಎಸ್ಆರ್ಟಿಸಿ ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಶನಿವಾರ ಆಯೋಜಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಟಿ.ಎಸ್. ಲತಾ, ಮಂಜುಳಾ ಎಸ್. ನಾಯಕ್, ಹೆಚ್.ಡಿ. ಗೌರಾಂಭ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.