ಬೆಂಗಳೂರು: ಹಾಲು ಖರೀದಿ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸಬೇಕು ಎನ್ನುವ ರೈತರ ಬೇಡಿಕೆಯನ್ನು ಸಿಎಂ ಎದುರು ಶೀಘ್ರವೇ ಮಂಡಿಸುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.
ಈ ಹಿಂದೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಹಾಲು ಖರೀದಿ ದರ ಹೆಚ್ಚಳಕ್ಕೆ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಆಗ ಮುಖ್ಯಮಂತ್ರಿಗಳು ಎಲ್ಲಾ ಹಾಲು ಮಹಾ ಮಂಡಳ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು ಚರ್ಚಿಸಿ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದರು.
ಸದ್ಯ ಹಾಲು ಖರೀದಿ ದರ ಬಗ್ಗೆ ಚರ್ಚೆಯಾಗಿಲ್ಲ. ಆರು ತಿಂಗಳ ಹಿಂದೆ ಈ ಬಗ್ಗೆ ರೈತರು ಬೇಡಿಕೆ ಇಟ್ಟಿದ್ದು, ಅದೇ ಪ್ರಸ್ತಾಪವನ್ನು ಜನವರಿಯಲ್ಲಿ ಮುಖ್ಯಮಂತ್ರಿಗಳ ಎದುರು ಮಂಡಿಸಲಾಗುವುದು ಎಂದು ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ.