ಬೆಳಗಾವಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವು ಜಿಲ್ಲೆಯ ಜನರನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಬೆಳಗಾವಿಯಲ್ಲಿಯೂ ಬಾಣಂತಿಯರ ಸರಣಿ ಸಾವು ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಿದೆ.
ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳು ಮೃತಪಟ್ಟಿದ್ದಾರೆ ಎಂಬ ಆತಂಕಕಾರಿ ವರದಿ ಬಹಿರಂಗವಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ ಬಾಣಂತಿಯರು ಸವನ್ನಪ್ಪಿದ್ದಾರೆ.
ತೂಕ ಕಡಿಮೆ, ಅಪೌಷ್ಠಿಕತೆ, ನ್ಯುಮೋನಿಯಾ ಮುಂತಾದ ಕಾರಣಗಳಿಂದ ಶಿಶುಗಳು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪ್ರಭಾರಿ ಆರೋಗ್ಯಾಧಿಕಾರಿ ಶರಣಪ್ಪ ಗಡೆದ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 6 ತಿಂಗಳಲ್ಲಿ ಬರೋಬ್ಬರಿ 322 ಶಿಶುಗಳು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯೊಂದರಲ್ಲೇ 172 ಶಿಶುಗಳು ಮೃತಪಟ್ಟಿವೆ. ಪ್ರತಿ ತಿಂಗಳು ಸರಾಸರಿ 45-50 ಶಿಶುಗಳು ಸಾವನ್ನಪ್ಪಿವೆ. ತೂಕ ಕಡಿಮೆ, ಅಪೌಷ್ಠಿಕತೆ, ನ್ಯುಮೋನಿಯಾ, ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾಗಿ ಆಸ್ಪತ್ರೆ ಅಧೀಕ್ಷಕ ಡಾ.ವಿಠ್ಠಲ್ ಶಿಂಧೆ ಹಾಗೂ ಡಿಹೆಚ್ ಒ ಶರಣಪ್ಪ ತಿಳಿಸಿದ್ದಾರೆ.