ಶಿವಮೊಗ್ಗ: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಶಿವಮೊಗ್ಗದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಾಗರ ಮೂಲದ ಲೋಕೇಶ್, ಸುಮಂಗಳ ದಂಪತಿಯ ಆರು ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು, ಅಧಿಕಾರಿಗಳು, ಪೊಲೀಸರು ಮಗುವನ್ನು ಸುರಕ್ಷಿತವಾಗಿ ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಹಕಾರ ನೀಡಿದ್ದಾರೆ.
ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಉಸಿರಾಟ ತೊಂದರೆಯ ಕಾರಣ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.